ಕುಶಾಲನಗರ, ಜು 19: ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಬಹುದೆಂದು ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಪಿ. ಕರುಂಬಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕೊಡಗು ರಕ್ತನಿಧಿ ಕೇಂದ್ರ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಂಧದಕೋಟಿ ಅರಣ್ಯ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಅಪಘಾತದಿಂದ ಗಾಯಗೊಂಡ ರೋಗಿಗಳಿಗೆ ತುರ್ತು ರಕ್ತದ ಅವಶ್ಯಕತೆ ಸಂದರ್ಭ ಜಿಲ್ಲಾ ರಕ್ತನಿಧಿ ಕೇಂದ್ರದಿಂದ ರಕ್ತ ನೀಡಿ ಅವರ ಪ್ರಾಣಹಾನಿಯನ್ನು ತಪ್ಪಿಸಲು ಇಂತಹ ರಕ್ತದಾನ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.

ತರಬೇತಿ ಕೇಂದ್ರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಶಿವಪ್ಪ, ಅರಣ್ಯಾಧಿಕಾರಿಗಳಾದ ರಾಘವೇಂದ್ರ ಜಿ. ನಾಯಕ್, ಟಿ. ವಿನುತಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಪೂರ್ಣಿಮಾ, ತಸ್ಮಿಯಾ, ಕಮಲಾ, ಮೊನಿಕಾ, ಚಿತ್ರಾ, ಅಕ್ತಾ ಇದ್ದರು.

ಉಪ ವಲಯ ಅರಣ್ಯಾಧಿಕಾರಿ ಮತ್ತು ಮೋಜಿಣಿದಾರ ಬುನಾದಿ ತರಬೇತಿ ಶಿಬಿರದ 40ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ರಕ್ತದಾನದಲ್ಲಿ ಪಾಲ್ಗೊಂಡಿದ್ದರು.