ನಾಪೆÇೀಕ್ಲು, ಜು. 20: ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದ ಪರಂಬಳಿಯಿಂದ ಮಾದಪಳ್ಳಿ ಪಲಾರಿಕೆ ಹಾಗೂ ಕುವಲೆಕಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಗಲೀಕರಣಗೊಳಿಸುವ ನೆಪದಲ್ಲಿ ಪೆÇಯಕೆರೆ ರeóÁಕ್ ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಮಾದಪಳ್ಳಿ ಹಾಗೂ ಪಾಲಾರಿಕೆ ಕುಟುಂಬಸ್ಥರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ರಸ್ತೆ ಹಾಳುಗೆಡವಿರುವ ಬಗ್ಗೆ ಕುಂಜಿಲ - ಕಕ್ಕಬ್ಬೆ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವದೇ ಪ್ರಯೋಜನವಿಲ್ಲ. ಈ ರಸ್ತೆಯಲ್ಲಿ ಜನ ಸಂಚಾರ ಹಾಗೂ ವಾಹನ ಸಂಚಾರ ಕೂಡ ಸಾಧ್ಯವಿಲ್ಲದಂತಾಗಿದೆ ಎಂದು ದೂರಿನಲ್ಲಿ ತಿಳಿಸಿರುವ ಅವರು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.