ಸಿದ್ದಾಪುರ, ಜು. 21: ಚೆನ್ನಯ್ಯನಕೋಟೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಕ್ಷೇತ್ರ್ರದ ವಿವಿಧ ಕಾಮಾಗಾರಿಗಳ ಪರಿಶೀಲನೆ ನಡೆಸಿದರು. ಮಾಲ್ದಾರೆ ಗ್ರಾಮದ ಅಂಚೆತಿಟ್ಟು ಗ್ರಾಮದ ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. ಮಾಲ್ದಾರೆ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಕೆಲವರು ಇಲ್ಲದಸಲ್ಲದ ಅರೋಪ ಮಾಡಿದ್ದು ಸಮಂಜಸವಲ್ಲ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವದಾಗಿ ಭರವಸೆ ನೀಡಿದರು.