ಸೋಮವಾರಪೇಟೆ, ಜು. 21: ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಹೆಚ್.ಬಿ. ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಜನಸಂಖ್ಯಾ ಸ್ಫೋಟದಿಂದ ದೇಶದ ಆರ್ಥಿಕ ಪ್ರಗತಿಯಲ್ಲಿ ಹಿನ್ನಡೆಯಾಗುತ್ತಿದ್ದು, ಜನಸಂಖ್ಯಾ ನಿಯಂತ್ರಣ ಮುಖ್ಯವಾಗಿದೆ. ಜನಜಾಗೃತಿಯಂತಹ ಕಾರ್ಯಕ್ರಮದಲ್ಲಿ ಯುವಜನತೆ ಭಾಗವಹಿಸಬೇಕು ಎಂದರು.