ಮಡಿಕೇರಿ, ಜು. 21: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವೀರಾಜಪೇಟೆಯ ಪಕ್ಷಿ ತಜ್ಞ ಡಾ. ನರಸಿಂಹನ್ ಆಗಮಿಸಿದ್ದರು. ತಮ್ಮ ಉಪನ್ಯಾಸದಲ್ಲಿ ‘ಕೊಡಗಿನ ಬಾನಾಡಿಗಳು ಹಾಗೂ ನಾವು’ ಎಂಬ ವಿಷಯವಾಗಿ ಮಾತನಾಡಿ, ಪಕ್ಷಿಗಳು ಮನುಷ್ಯನ ಜೀವನದಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತವೆ. ಪಕ್ಷಿಗಳು ಕ್ರೀಮಿಕೀಟಗಳನ್ನು ತಿಂದು ನಿಸರ್ಗದಲ್ಲಿ ಅವುಗಳ ಸಮತೋಲನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಪ್ರಥಮ ಬಿಕಾಂ ವಿದ್ಯಾರ್ಥಿಗಳಿಗೆ ದರ್ಶನ್ ವಿನೋದ್ ಯೋಗ ತರಬೇತಿ ನಡೆಸಿಕೊಟ್ಟರು. ಮಾಲತಿ ಅಂತಿಮ ಬಿಕಾಂ ವಿದ್ಯಾರ್ಥಿಗಳಿಗೆ ಸಂವಹನ ಇಂಗ್ಲೀಷ್ ತರಗತಿಯನ್ನು ನಡೆಸಿಕೊಟ್ಟರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು ಹಾಜರಿದ್ದರು ಎಂದು ಕಾಲೇಜಿನ ಪ್ರಾಂಶುಪಾಲ ಪಟ್ಟಡ ಪೂವಣ್ಣ ತಿಳಿಸಿದರು.