ಮಡಿಕೇರಿ, ಜು. 21: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್.) ಬೆಂಗಳೂರು ವತಿಯಿಂದ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಪ್ಲೋಮ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏರೋನಾಟಿಕಲ್, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್, ಕಂಪ್ಯೂಟರ್ ಸೈನ್ಸ್, ಇನಫಾರ್ಮೆಷನ್ ಸೈನ್ಸ್, ಮೆಟಲರ್ಜಿ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್ ಇವುಗಳಲ್ಲಿ ಯಾವದಾದರು ಒಂದು ವೃತ್ತಿಯಲ್ಲಿ ಮೂರು ವರ್ಷಗಳ ಡಿಪ್ಲೋಮ ಪಾಸಾಗಿದ್ದು, ಡಿಪ್ಲೋಮ ಪ್ರಮಾಣಪತ್ರ ಹೊಂದಿರಬೇಕು.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಡಿಪ್ಲೋಮ ಅಂಕಪಟ್ಟಿಗಳು ಹಾಗೂ ಡಿಪ್ಲೋಮ ಪ್ರಮಾಣ ಪತ್ರ, ಮೀಸಲಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 8 ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.