ನಾಪೆÇೀಕ್ಲು, ಜು. 21: ನಾಪೆÇೀಕ್ಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಧಾರ್ ಕಾರ್ಡ್ ನೋಂದಾವಣೆ ಮತ್ತು ತಿದ್ದುಪಡಿ ಕೇಂದ್ರವನ್ನು ಆರಂಭಿಸುವಂತೆ ಮಡಿಕೇರಿ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿದ ಅವರು ನಾಪೆÇೀಕ್ಲು ಕಂದಾಯ ಕಚೇರಿಯಲ್ಲಿ ಆರಂಭಿಸಲಾಗಿದ್ದ ಆಧಾರ್ ಕಾರ್ಡ್ ನೋಂದಾವಣೆ ಕೇಂದ್ರವನ್ನು ರದ್ದುಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ.

ನಾಪೆÇೀಕ್ಲು ಅಂಚೆ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಅಲ್ಲಿಯೂ ನೋಂದಾವಣೆ ಸಾಧ್ಯವಿಲ್ಲದಂತಾಗಿದೆ. ನಾಪೆÇೀಕ್ಲು ಗ್ರಾಮ ಪಂಚಾಯಿತಿ ಕಚೇರಿಯು ಪಟ್ಟಣದ ಹೃದಯ ಭಾಗದಲ್ಲಿದ್ದು, ಇಲ್ಲಿ ಆಧಾರ್ ಕಾರ್ಡ್ ನೋಂದಾವಣೆ ಕೇಂದ್ರವನ್ನು ಆರಂಭಿಸುವದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಹೇಳಿದರು.