ನಾಪೋಕ್ಲು, ಜು. 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶೇಷಚೇತನರಿಗಾಗಿ ಮಂಜೂರಾದ ಉಪಕರಣಗಳ ವಿತರಣಾ ಕಾರ್ಯಕ್ರಮ ನಾಪೋಕ್ಲು ಮಹಿಳಾ ಸಮಾಜದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ಸದಾಶಿವಗೌಡ ಫಲಾನುಭವಿಗಳಿಗೆ ಉಪಕರಣಗಳನ್ನು ವಿತರಿಸಿದರು. ಈ ಸಂದರ್ಭ ಭಾಗಮಂಡಲ ವಲಯದ ಮೇಲ್ವಿಚಾರಕ ಸಂತೋಷ್, ಸೇವಾ ಪ್ರತಿನಿಧಿಗಳಾದ ದಿವ್ಯಾ ಎನ್.ಕೆ., ದಿವ್ಯಾ ಬಿ.ಹೆಚ್., ಉಮಾಲಕ್ಷ್ಮಿ, ಒಕ್ಕೂಟದ ಅಧ್ಯಕ್ಷರು ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.