ಕೂಡಿಗೆ, ಜು. 21: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿ ಅವರು ಮುಂಬಡ್ತಿ ಹೊಂದಿದ್ದು, ಕಡಗದಾಳು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಇವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಕಾರ್ಯದರ್ಶಿ ಕಾಂಚನ, ಸಹಾಯಕ ಕಂದಾಯ ವಸೂಲಿಗಾರರಾದ ಪ್ರವೀಣ್, ಸಿಬ್ಬಂದಿ ದಿವ್ಯ ಸೇರಿದಂತೆ ಮತ್ತಿತರರು ಇದ್ದರು.