ಕೂಡಿಗೆ, ಜು. 21: ಕೂಡಿಗೆಯ ಆಂಜೆಲಾ ವಿದ್ಯಾನಿ ಕೇತನ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾಳೆ. ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಆಂಜೆಲಾ ವಿದ್ಯಾನಿಕೇತನ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಮಾನಸ ಕೆ.ಎ.ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಕಲಾ ಜ್ಯೋತಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾಳೆ.