ಕೂಡಿಗೆ, ಜು. 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ಕಣಿವೆ ಕಾರ್ಯಕ್ಷೇತ್ರದ ಆಯಿಷಾ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗಾಲಿ ಕುರ್ಚಿಯನ್ನು ವಲಯದ ಮೇಲ್ವಿಚಾರಕ ಕೆ. ವಿನೋದ್‍ಕುಮಾರ್ ವಿತರಣೆ ಮಾಡಿದರು.
ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಪುಷ್ಪ, ಕಾರ್ಯದರ್ಶಿ ವಾಸವಿ, ಸದಸ್ಯೆ ಗೌರಮ್ಮ, ಸೇವಾ ಪ್ರತಿನಿಧಿ ಲಕ್ಷ್ಮೀ ಹಾಜರಿದ್ದರು.