ಸೋಮವಾರಪೇಟೆ, ಜು. 21: ಸಮೀಪದ ಹಾನಗಲ್ ಗ್ರಾಮದ ಆಷ್ಮಿನಾ ಅವರ ಪತಿ ರಜಾಕ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇವರ ಚಿಕಿತ್ಸೆಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 10,000 ಸಹಾಯ ಧನವನ್ನು ವಿತರಿಸಲಾಯಿತು.
ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಅವರು ಪರಿಹಾರ ಧನದ ಚೆಕ್ ವಿತರಿಸಿದರು. ಈ ಸಂದರ್ಭ ಸೋಮವಾರಪೇಟೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ಶಾಂತಳ್ಳಿ ವಲಯ ಮೇಲ್ವಿಚಾರಕ ಸುಬ್ರಮಣ್ಯ, ಕಚೇರಿ ಪ್ರಬಂಧಕ ಹರೀಶ್ ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.