ಮಡಿಕೇರಿ, ಜು. 20: ಮದೆನಾಡು ಉಪಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನ ವಹಿಸಿದ್ದರು. ಪಂಚಾಯಿತಿ ಪಿ.ಡಿ.ಓ. ಚಂದ್ರಶೇಖರ್, ಅಂಗನವಾಡಿ ಮೇಲ್ವಿಚಾರಕಿ ಶೀಲಾವತಿ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಯಶೋದ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪ, ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಕ್ಕಳ ಎತ್ತರ, ತೂಕದ ಪ್ರಕಾರ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಯಿತು. ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನ ನೀಡಲಾಯಿತು.