ನಾಪೋಕ್ಲು, ಜು. 21: ಪ್ರಸ್ತುತ ವ್ಯವಸ್ಥೆಯಲ್ಲಿ ಜೀವನ ಮೌಲ್ಯಗಳನ್ನು ಸಾಮಾಜಿಕ ಸ್ಥಿತಿಗತಿಗಳನ್ನು ಅರಿತು ನಡೆಯಬೇಕಿದೆ ಎಂದು ನಿವೃತ್ತ ದೈಹಿಕ ಅಧ್ಯಾಪಕ ನಾಗಯ್ಯ ಶೆಟ್ಟಿ ಹೇಳಿದರು.
ಮಡಿಕೇರಿ ತಾಲೂಕು ದೈಹಿಕ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಚೆಟ್ಟಳ್ಳಿ ಪ್ರೌಢಶಾಲಾ ನಿವೃತ್ತ ದೈಹಿಕ ಶಿಕ್ಷಕ ಮಾಚಯ್ಯ ಮಾತನಾಡಿ, ಪ್ರತಿಯೊಬ್ಬರು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ವೆಂಕಟೇಶ್, ಅಧ್ಯಕ್ಷ ಪೂರ್ಣೇಶ್ ಬೊಯಿಕೇರಿ, ದೊಡ್ಡಣ್ಣ ಬರಮೇಲು, ಕಸ್ತೂರಿ, ಶಿವಪ್ರಸಾದ್ ಹಾಗೂ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.