ಮಡಿಕೇರಿ, ಜು. 22: ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವ ಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆ ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಆಹ್ವಾನಿಸಿದೆ.
ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾಯ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವರ್ಷದಲ್ಲಿ 2 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ. 5 ಸಾವಿರ ಮಿತಿಯೊಳಗೆ ವೆಚ್ಚ ಭರಿಸಲಾಗುವದು. ಇದಲ್ಲದೆ ಪ್ರಾಧಿಕಾರ ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವದು. ಅರ್ಜಿ ಸಲ್ಲಿಸಲು ತಾ. 31 ಕಡೆಯ ದಿನವಾಗಿದೆ.
ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿ ಠಿಡಿಚಿಜhiಞಚಿಡಿಚಿ.ಛಿom ನಲ್ಲಿ ಅರ್ಜಿ ಪಡೆಯಬಹುದಾಗಿದೆ. ದೂರವಾಣಿ: 080-22107704 /22484516 ರಲ್ಲಿ ಸಂಪರ್ಕಿಸಬಹುದು.