ಮಡಿಕೇರಿ, ಜು. 22: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ. 6 ಸಾವಿರಗಳನ್ನು ಪ್ರತಿ 4 ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ ಅಥವಾ ಜನ ಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ನೋಂದಾಯಿಸಿಕೊಳ್ಳಬಹುದು. ರೈತರು ತಾವೇ ಸ್ವಯಂ ಘೋಷಣೆ ಮಾಡಿಕೊಳ್ಳಲು Pಒ-ಏISಂಓ ಪೋರ್ಟಲ್‍ನಲ್ಲಿ hಣಣಠಿ://ಜಿಡಿuiಣsಠಿmಞ.ಞಚಿಡಿಟಿಚಿಣಚಿಞಚಿ.gov.iಟಿ/ ಅiಣizeಟಿ/ಔಟಿಟiಟಿe ಖegisಣಡಿಚಿಣioಟಿ. ಚಿsಠಿx ಅವಕಾಶ ಕಲ್ಪಿಸಿಕೊಡಲಾಗಿದೆ. ರೈತರು ತಮ್ಮ ಸೂಕ್ತ ಮಾಹಿತಿಗಳೊಂದಿಗೆ ಈ ಲಿಂಕ್ ಮೂಲಕ ದಾಖಲೀಕರಣ ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆ ಮಾಡಿಕೊಳ್ಳಲು ತಾ. 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.