ಮಡಿಕೇರಿ, ಜು. 23: ನಾಲ್ಕೇರಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ನಾಲ್ಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. 26 ರಂದು ಪೂರ್ವಾಹ್ನ 10 ಗಂಟೆಗೆ ನಾಲ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಬಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ ಇವರ ಸಮ್ಮುಖದಲ್ಲಿ ನಡೆಯಲಿದೆ.
ಕಾನೂರು: ಕಾನೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ತಾ. 31 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಲತಾ ಕುಮಾರಿ ಅಧ್ಯಕ್ಷತೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ನಾಲ್ಕೇರಿ: ನಾಲ್ಕೇರಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಅರಣ್ಯ ಹಕ್ಕು ಸಮಿತಿ ಗ್ರಾಮ ಸಭೆಯನ್ನು ನಾಲ್ಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. 26 ರಂದು ಅಪರಾಹ್ನ 12.30 ಗಂಟೆಗೆ ನಾಲ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಬಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ ಇವರ ಸಮ್ಮುಖದಲ್ಲಿ ನಡೆಯಲಿದೆ.