ಮಡಿಕೇರಿ, ಜು. 22: ಕಾಫಿ ಬೆಳೆಗೆ ಸಂಬಂಧಿಸಿದಂತೆ ತಾ. 23 ರಂದು (ಇಂದು) ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು ಸಂಸದರುಗಳ ನೇತೃತ್ವದಲ್ಲಿ ಇತ್ತೀಚೆಗೆ ವಾಣಿಜ್ಯ ಸಚಿವರು ಹಾಗೂ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಬೆಳೆಗಾರರ ಪರವಾಗಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ತೀರ್ಥ ಮಲ್ಲೇಶ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.