ಗೋಣಿಕೊಪ್ಪಲು, ಜು. 23: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಆಲೀರ ಎಂ. ರಶೀದ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ಅಹಮ್ಮದ್ ನೇಮಿಸಿದ್ದು, ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಯಾಕುಬ್, ಜಿಲ್ಲಾ ಕಾಂಗ್ರೆಸ್‍ನ ಕಾರ್ಯದರ್ಶಿ ಸುರೇಶ್ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.