ಮಡಿಕೇರಿ, ಜು. 22: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ, ಯುವತಿಯರಿಗೆ 2019-20 ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ವಿತರಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ತಾ. 23 ರಂದು (ಇಂದು) ಉಪ ವಿಭಾಗಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ತಾ. 23 ರಂದು ಬೆಳಗ್ಗೆ 10.30 ಗಂಟೆಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ವರ್ಗದ ಅರ್ಜಿದಾರರು ಮತ್ತು ಬೆಳಗ್ಗೆ 11.30 ಗಂಟೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರು ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸುವ ಸಮಿತಿಯ ಮುಂದೆ ಪ್ರವಾಸಿ ಟ್ಯಾಕ್ಸಿ ಪ್ರಕಟಣೆಯಲ್ಲಿ ಸೂಚಿಸಲಾಗಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಖುದ್ದಾಗಿ ಹಾಜರಾಗುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಕೋರಿದ್ದಾರೆ.