ಮಡಿಕೇರಿ, ಜು. 22: ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ತಾ. 22 ರಿಂದ ಆಗಸ್ಟ್, 3 ರವರೆಗೆ ಯಾವದೇ ಅವ್ಯವಹಾರ ಗಳಿಲ್ಲದೆ ಸುಗಮವಾಗಿ ವಾಣಿಜ್ಯ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.