ಕುಶಾಲನಗರ, ಜು. 22: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಕುಶಾಲನಗರದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸೆಸ್ಕ್‍ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಮತ್ತು ಸುಂಟಿಕೊಪ್ಪ ಹೋಬಳಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮೀಣ ಪ್ರದೇಶದ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿದರು.
ಗ್ರಾ.ಪಂ. ವ್ಯಾಪ್ತಿಗೆ ಬರುವ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿ ಯೋಜನೆಗಳನ್ನು ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಸೆಸ್ಕ್‍ನ ಸಹಾಯಕ ಅಭಿಯಂತರ ಬಸವರಾಜು, ಲಾವಣ್ಯ, ವಿನಯ್ ಮತ್ತಿತರರು ಇದ್ದರು.