ವೀರಾಜಪೇಟೆ, ಜು. 23: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಸಭಾಂಗಣದಲ್ಲಿ ನಡೆಯಲಿರುವ 8ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಕೆ. ಬೋಯಿಕೇರಿ ಗ್ರಾಮದ ನಾಯಕಂಡ ಬೇಬಿ ಚಿಣ್ಣಪ್ಪ ಆಯ್ಕೆಯಾಗಿದ್ದಾರೆ.

ಇವರನ್ನು ಜು. 22 ರಂದು ಸಮ್ಮೇಳದ ಅಧ್ಯಕ್ಷತೆ ವಹಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ನೇತೃತ್ವದಲ್ಲಿ ಅಧಿಕೃತವಾಗಿ ಅವರ ನಿವಾಸದಲ್ಲಿ ಆಹ್ವಾನ ನೀಡಲಾಗಿದೆ.

ಈ ಸಂದರ್ಭ ತಾಲೂಕು ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ತಾಲೂಕು ಸಮಿತಿಯ ಖಾಯಂ ಆಹ್ವಾನಿತ ಸದಸ್ಯ ಪಾರ್ಥಚಿಣ್ಣಪ್ಪ, ಮಾದ್ಯಮ ಸಲಹೆಗಾರ ಕೆ.ಕೆ. ಬೋಪಣ್ಣ, ಸಮಿತಿ ಸದಸ್ಯರಾದ ಮುಲ್ಲೇಂಗಡ ರೇವತಿ ಪೂವಯ್ಯ ಮತ್ತು ವೈಲೇಶ್ ಉಪಸ್ಥಿತರಿದ್ದರು.