ಮಡಿಕೇರಿ, ಜು. 22: ಹಾವೇರಿಯಲ್ಲಿ ನಡೆದ ರೈತ ಹುತಾತ್ಮರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಹಲವಾರು ಮಂದಿ ಪಾಲ್ಗೊಂಡಿದ್ದರು. ರಾಜ್ಯ ಅಧ್ಯಕ್ಷರಾದ ಜಿ.ಎ. ಲಕ್ಷ್ಮಿನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮ ರೈತರಿಗೆ ಸಂತಾಪ ವ್ಯಕ್ತಪಡಿಸಲಾಯಿತು. ಕೊಡಗು ಜಿಲ್ಲಾಧ್ಯಕ್ಷ ಗಣೇಶ್ ಗಣಪತಿ ನೇತೃತ್ವದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಇದರಲ್ಲಿ ಭಾಗಿಯಾಗಿದ್ದರು.