ಶನಿವಾರಸಂತೆ, ಜು. 25: ನಿವೃತ್ತ ಸೈನಿಕರ ಸಂಘ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಸಮಾರಂಭ ತಾ. 26ರಂದು (ಇಂದು) ಶ್ರೀ ನಂದೀಶ್ವರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಸಂಘದ ಕಚೇರಿಯಿಂದ ಮೆರವಣಿಗೆ ಹೊರಟು ಬೈಪಾಸ್ ರಸ್ತೆಯಲ್ಲಿ ಸಹಕಾರ ಬ್ಯಾಂಕ್ ಮಾರ್ಗವಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿ ಸಾಗಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಂಡ ನಂತರ ಸಮಾರಂಭ ನಡೆಯಲಿದೆ.