ವೀರಾಜಪೇಟೆ, ಜು. 24: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದಿಂದ ತಾ. 26 ರಂದು ಬೆಳಿಗ್ಗೆ 10.30 ಗಂಟೆಗೆ ಕಾರ್ಗಿಲ್ ವಿಜಯೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10.30 ಗಂಟೆಗೆ ಯೋಧರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಮಡಿದ ಯೋಧರಿಗೆ ಸಂತಾಪ ಸೂಚಿಸಲಾಗುವದು ಎಂದು ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ ತಿಳಿಸಿದ್ದಾರೆ.