ನಾಪೋಕ್ಲು, ಜು. 24 : ನಾಪೋಕ್ಲು ಹೋಬಳಿ ವ್ಯಾಪ್ತಿಗೆ ಒಳಪಟ್ಟ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಡಾ. ಜವರೇಗೌಡ ಅಧ್ಯಕ್ಷತೆ ವಹಿಸಿದ್ದರು. ಇಲ್ಲಿನ ನಾಡಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 24 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಮಂಜೂರಾದ ಪಿಂಚಣಿ ಆದೇಶಪತ್ರವನ್ನು ವಿತರಿಸಲಾಯಿತು. ಹೊಸದಾಗಿ 19 ಪಿಂಚಣಿ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕಂದಾಯ ಪರಿವೀಕ್ಷಕ ಜಿ.ವಿ. ರಾಮಯ್ಯ, ಗ್ರಾಮಲೆಕ್ಕಾಧಿಕಾರಿಗಳಾದ ಜನಾದರ್Àನ, ಅಮೃತ, ಸ್ವಾತಿ, ದಾನೇಶ್ವರಿ ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.