ಬೆಂಗಳೂರು, ಜು. 25: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮೂವರು ಶಾಸಕರನ್ನು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಣೆಬೆನ್ನೂರು ಶಾಸಕ ಆರ್. ಶಂಕರ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರುಗಳನ್ನು 2023ರವರೆಗೆ ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮೂವರು ಶಾಸಕರು ನಿರ್ಧರಿಸಿದ್ದಾರೆ.