ಮಡಿಕೇರಿ, ಜು. 24: ಸಂಸದ ಪ್ರತಾಪ್ ಸಿಂಹ ಅವರು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಭಾರಿ ಮಳೆಯಿಂದಾಗಿ ಮಡಿಕೇರಿ - ಸಂಪಾಜೆ ಭಾಗದ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಿರುಕು ಬಿಟ್ಟಿದೆ. ಅದನ್ನು ಸರಿಪಡಿಸಲು ಹಾಗೂ ತಡೆಗೋಡೆ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ ಮಾಡಿದ್ದು; ಕೂಡಲೇ ಅನುದಾನ ಬಿಡುಗಡೆಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದ್ದಾರೆ.