ಸೋಮವಾರಪೇಟೆ, ಜು. 24: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಗರಗಂದೂರು ಗ್ರಾಮದ ಎ. ಅಂಗನವಾಡಿ ಕೇಂದ್ರದಲ್ಲಿ, ಮಾದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ವೀಕ್ಷಕಿಯಾಗಿ ಆಗಮಿಸಿದ್ದ ಕುಸುಮ ಮಾತನಾಡಿ, ಮಕ್ಕಳ ಆರೋಗ್ಯ ಮತ್ತು ಅವರ ಚಲನ ವಲನದ ಬಗ್ಗೆ ಪೋಷಕರು ನಿಗಾ ವಹಿಸಬೇಕು. ಯುವ ಜನತೆ ಇಂದು ಧೂಮಪಾನ, ಗಾಂಜಾ ಸೇವನೆಯಂತಹ ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯ ದೊಂದಿಗೆ, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ಇಂತಹ ದುಶ್ಚಟಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕು ಎಂದರು.

ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ, ಅಭಿವೃದ್ಧಿ ಅಧಿಕಾರಿ ಲೋಕೇಶ್, ಅಂಗನವಾಡಿ ಶಿಕ್ಷಕಿ ದೇವಕಿ ಸೇರಿದಂತೆ ಬಾಲವಿಕಾಸ ಸಮಿತಿ ಸದಸ್ಯರು, ಸ್ವ ಸಹಾಯ ಸಂಘಗಳ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.