ಮಡಿಕೇರಿ, ಜು. 25 : ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್, ಯೂತ್ ರೆಡ್ ಕ್ರಾಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. 26 ರಂದು ಬೆಳಿಗ್ಗೆ 11.15 ಗಂಟೆಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ, ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ ಹಾಗೂ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಕರು ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಕೆ.ಸಿ.ದಯಾನಂದ ಇತರರು ಪಾಲ್ಗೊಳ್ಳಲಿದ್ದಾರೆ.