ಮಡಿಕೇರಿ, ಜು. 25 : ಗೋಣಿಕೊಪ್ಪ ಉಪ ವಿಭಾಗದ ಶ್ರೀಮಂಗಲ ವ್ಯಾಪ್ತಿಯ ಬಿರುನಾಣಿ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ತಾ. 26 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಬಿರುನಾಣಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ತಿಳಿಸಿದ್ದಾರೆ.