ಮಡಿಕೇರಿ, ಜು. 24: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 1 ರಿಂದ 30 ರವರೆಗೆ ಕಂಪ್ಯೂಟರ್ ಉಚಿತ ತರಬೇತಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಈ ತರಬೇತಿಯಲ್ಲಿ ಕಂಪ್ಯೂಟರ್ ಬೇಸಿಕ್ ಹಾಗೂ ಕನ್ನಡ ನುಡಿಯ ಬಗ್ಗೆ ತರಬೇತಿ ನೀಡಲಾಗುವದು. 10ನೇ ತರಗತಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಹಾಗೂ 18 ರಿಂದ 35 ವಯೋಮಿತಿಯೊಳಗಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ತರಬೇತಿಯಲ್ಲಿ ಒಟ್ಟು 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.

ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ತಮ್ಮ ಹೆಸರು, ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಮೀಸಲಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್, ಗುರುತಿನ ಚೀಟಿಯ ಪ್ರತಿಗಳನ್ನು ಹಾಜರುಪಡಿಸಿ ನೋಂದಾಯಿಸಿಕೊಳ್ಳಬಹುದು. ಮೊದಲು ತರಬೇತಿಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.