ಮಡಿಕೇರಿ, ಜು. 24: ವೀರಾಜಪೇಟೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ವೀರಾಜಪೇಟೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ತಾ. 26 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಆಚರಿಸಲಾಗುವದು. ಮಾಜಿ ಸೈನಿಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್ ನಂಜಪ್ಪ ಹಾಗೂ ಉಪಾಧ್ಯಕ್ಷ ಚಪ್ಪಂಡ ಹರೀಶ್ ಕೋರಿದ್ದಾರೆ.