ಮಡಿಕೇರಿ, ಜು.24 : ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.35.62ರಷ್ಟು ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದೆ. 2019ನೇ ವರ್ಷದ ಮುಂಗಾರು ಮಳೆಯಿಂದ ಜಿಲ್ಲೆಯಲ್ಲಿ ಉಂಟಾದ ಸಮಸ್ಯೆಗಳು ಈ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮ, ಮತ್ತಿತರ ಅಂಶಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಳಗೊಂಡ ಪತ್ರಿಕಾ ಪ್ರಕಟಣೆಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಹೊರಡಿಸಲಾಗಿದೆ. ಕೊಡಗು ಜಿಲ್ಲೆಗೆ ಜೂನ್ ಮೊದಲನೇ ವಾರದಲ್ಲಿ ಮುಂಗಾರು ಕಾಲಿರಿಸಿದ್ದು ಜೂನ್ ಅಂತ್ಯದವರೆಗೂ ಜಿಲ್ಲೆಯಲ್ಲಿ ಮುಂಗಾರು ಕ್ಷೀಣವಾಗಿ ಮುಂದುವರೆದಿತ್ತು. ಆದರೆ ಜುಲೈಯಲ್ಲಿ ಮುಂಗಾರು ಸ್ವಲ್ಪಮಟ್ಟಿಗೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 18ರಿಂದ ಆರೆಂಜ್ ಅಲರ್ಟ್ ಮಾಹಿತಿ ಹೊರಡಿಸಲಾಗಿತ್ತು.

ಜಿಲ್ಲೆಗೆ ಜನವರಿಯಿಂದ ಈವರೆಗೆ 35.11 ಇಂಚು ಮಿ.ಮೀ ಮಳೆಯಾಗಿರುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಮಳೆಯ ಪ್ರಮಾಣ ಶೇ.35.62 ರಷ್ಟು ಕಡಿಮೆ ಇರುತ್ತದೆ ಹಾಗೂ ಜಿಲ್ಲಾಡಳಿತವು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರುತ್ತಾರೆ. ಯಾವದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಜನರು ಯಾವದೇ ಆತಂಕ ಪಡುವ ಅಗತ್ಯವಿರುವದಿಲ್ಲ. ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಯಲ್ಲಿ ವಾಟ್ಸಪ್‍ನಲ್ಲಿ ಸಹ ಪ್ರಕೃತಿ ವಿಕೋಪ ಸಂಬಂಧಿತ ದೂರುಗಳನ್ನು ಸ್ವೀಕರಿಸಲಾಗುತ್ತಿದ್ದು, ತುರ್ತು ಕ್ರಮ ವಹಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಂಟಾಗಿದ್ದ ಸಮಸ್ಯೆಗಳು - ಕೈಗೊಂಡಿರುವ ಕ್ರಮ

*2ನೇ ಮೊಣ್ಣಂಗೇರಿ ರಸ್ತೆಯಲ್ಲಿ ಬರೆ ಜರಿದು ರಸ್ತೆ ಸಂಚಾರ ಬಂದ್ ಆಗಿತ್ತು.

*ಜೋಡುಪಾಲದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿತ್ತು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

*ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ