ಕುಶಾಲನಗರ, ಜು. 25: ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕುಶಾಲನಗರಕ್ಕೆ ಭೇಟಿ ನೀಡಿ ಸ್ಥಳೀಯ ಕಾವೇರಿ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಲಾಭವನ ಕಾಮಗಾರಿ ಪರಿಶೀಲನೆ ನಡೆಸಿದರು.

ಕಳೆದ ಹಲವಾರು ವರ್ಷಗಳಿಂದ ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿರುವ ಕಟ್ಟಡಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವದರೊಂದಿಗೆ ಕಟ್ಟಡವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಹಸ್ತಾಂತರಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಲೋಕೋಪಯೋಗಿ ಇಲಾಖೆ ಅಭಿಯಂತರ ಸೈಜಿನ್ ಪೀಟರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕÀ ಕೆ.ಟಿ.ದರ್ಶನ್, ಪಪಂ ಅಭಿಯಂತರೆ ಶ್ರೀದೇವಿ, ಕಂದಾಯಾಧಿಕಾರಿ ಮಧುಸೂದನ್, ಕಲಾಭವನ ಮೇಲುಸ್ತುವಾರಿ ಸಮಿತಿ ಸದಸ್ಯ ಮೊಯಿದ್ದೀನ್ ಮತ್ತಿತರರು ಇದ್ದರು.