ಸೋಮವಾರಪೇಟೆ, ಜು. 24: ಆಲೇಕಟ್ಟೆ ರಸ್ತೆಯ ಭಾರತೀಯ ಯುವಕ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಎನ್.ಪಿ. ಮಂಜುನಾಥ್ ಆಯ್ಕೆಯಾಗಿದ್ದಾರೆ. ಹಿಂದಿನ ಸಾಲಿನ ಅಧ್ಯಕ್ಷ ಶ್ರೀಕಾಂತ್ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಸಿ.ಎನ್. ಶಿವಪ್ರಸಾದ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಟಿ. ಶಶಿಕುಮಾರ್, ಸಹ ಕಾರ್ಯದರ್ಶಿಯಾಗಿ ಹೆಚ್. ಶ್ರೀಜಿತ್, ಖಜಾಂಚಿಯಾಗಿ ಬಿ.ಎಸ್. ಜನಾರ್ಧನ್ ಅವರುಗಳನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ಸಂಘದ ವತಿಯಿಂದ ಗೌರಿ ಗಣೇಶ ಉತ್ಸವವನ್ನು ನಡೆಸಲು ತೀರ್ಮಾನಿಸಿದ್ದು, ಸಮಿತಿಯ ಅಧ್ಯಕ್ಷರನ್ನಾಗಿ ಸಿ.ಎ. ಉಮೇಶ್ ಅವರನ್ನು ನೇಮಕ ಮಾಡಲಾಯಿತು.