ಸುಂಟಿಕೊಪ್ಪ, ಜು. 25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ತಾಲೂಕು ಸುಂಟಿಕೊಪ್ಪ ವಲಯದ ವತಿಯಿಂದ ತಾ.28 ರಂದು ಬೆಳಿಗ್ಗೆ 10 ಗಂಟೆಗೆ ಕೊಡಗರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು 6 ತಂಡಗಳ ವಾರ್ಷಿಕೋತ್ಸವ ಕಾರ್ಯಕ್ರಮವು ನಡೆಯಲಿದೆ.

ಉದ್ಘಾಟನೆಯನ್ನು ಸುಂಟಿಕೊಪ್ಪ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಎಸ್.ಎನ್.ಜಯರಾಂ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷ ಹೆಚ್.ಇ.ಅಬ್ಬಾಸ್ ವಹಿಸುವರು. ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ನಿರ್ದೇಶಕರಾದ ಯೋಗೀಶ್ ಎ., ಹಾಗೂ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್.ಆರ್. ಕೃಷ್ಣಭಟ್ ಭಾಗವಹಿಸಲಿದ್ದಾರೆ.