ಮೂರ್ನಾಡು, ಜು. 24: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.

ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭವನ್ನು ಮಡಿಕೇರಿ ಸಮಾಜ ಸೇವಕಿ ಗೀತಾ ಗಿರೀಶ್ ಉದ್ಘಾಟಿಸಿದರು. ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ, ನಿರ್ದೇಶಕಿ ಎ.ಎಂ. ಶೈಲಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪಿ.ಎಂ. ದೇವಕಿ, ಎನ್.ಎಸ್.ಎಸ್. ಯೋಜನಾಧಿಕಾರಿ ಯು.ಸಿ. ಮಾಲತಿ ಉಪಸ್ಥಿತರಿದ್ದರು.

ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ಎನ್.ಆರ್. ಮನು ಹಾಗೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ಕೆ.ವೈ. ಶರ್ಮಿಳಾ ಅವರನ್ನು ಸನ್ಮಾನಿಸಲಾಯಿತು.