ಮಡಿಕೇರಿ, ಜು. 26: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಇವರ ವತಿಯಿಂದ ಫೋಕ್ಸೋ, ಬಾಲ ನ್ಯಾಯ ಮಂಡಳಿ ಹಾಗೂ ಬಾಲ್ಯ ವಿವಾಹ ನಿಷೇಧ ಮತ್ತಿತರ ವಿಷಯಗಳ ಕುರಿತು ತಾ. 27 ರಂದು (ಇಂದು) ಬೆಳಗ್ಗೆ 10 ಗಂಟೆಗೆ ನಗರದ ಪೊಲೀಸ್ ಕ್ಯಾಂಟೀನ್ ಮೇಲಿನ ಸಭಾಂಗಣದಲ್ಲಿ ಕಾನೂನು ಕಾರ್ಯಾಗಾರ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಇತರರು ಪಾಲ್ಗೊಳ್ಳಲಿದ್ದಾರೆ.