ಕುಶಾಲನಗರ, ಜು. 26: ಕುಶಾಲನಗರ ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಾಟಲಿನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜನತಾ ಕಾಲನಿಯ ಬಾರ್ ಒಂದರಲ್ಲಿ ಮಾತಿಗೆ ಮಾತು ಬೆಳೆದು ಸಾಗರ್ ಮತ್ತು ಸಹಚರನೊಬ್ಬ ಸೇರಿ ಮುಳ್ಳುಸೋಗೆ ಗ್ರಾಪಂ ಮಾಜಿ ಸದಸ್ಯ ಎಂ.ಎಸ್.ರಾಜೇಶ್ ಎಂಬವರ ತಲೆಗೆ ಬಾಟಲಿಯಿಂದ ಹಲ್ಲೆ ಮಾಡಿದ್ದು ಗಾಯಗೊಂಡು ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.