ಮಡಿಕೇರಿ, ಜು.26 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಚೇರಂಬಾಣೆಯಲ್ಲಿ ಹಮ್ಮಿಕೊಂಡಿದ್ದು, ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಮಾಜಿ ಯೋಧ ಕಿಗ್ಗಾಲು ಗಿರೀಶ್ ಅವರನ್ನು ಪರಿಷತ್ತು ವತಿಯಿಂದ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. ಇದರೊಂದಿಗೆ ಸಮ್ಮೇಳನದ ಲಾಂಛನವನ್ನು ಕೂಡ ಬಿಡುಗಡೆ ಮಾಡಲಾಯಿತು.

ಇಂದು ಬೆಳಿಗ್ಗೆ ಕಿಗ್ಗಾಲುವಿನಲ್ಲಿರುವ ಗಿರೀಶ್ ಅವರ ಮನೆಗೆ ತೆರಳಿ ಗಿರೀಶ್ ಅವರನ್ನು ಸಮ್ಮೇಳನಕ್ಕೆ ಸಾಂಪ್ರಾದಾಯಿಕವಾಗಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಕ.ಸಾ.ಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ನಿರ್ದೇಶಕಿ ಪರ್ಲಕೋಟಿ ಸುನಿತಾಪ್ರೀತು, ಮೂರ್ನಾಡು ಹೋಬಳಿ ಅಧ್ಯಕ್ಷ ಪಿ.ಪಿ. ಸುಕುಮಾರ್, ಕಾರ್ಯದರ್ಶಿ ಪಿ.ಎಸ್. ರವಿಕೃಷ್ಣ, ಸಾಹಿತಿ ರಜಿತಾ ಕಾರ್ಯಪ್ಪ, ಶಶಿಕಲಾ ಗಿರೀಶ್ ಇದ್ದರು.

ಲಾಂಛನ ಬಿಡುಗಡೆ

ಸಮ್ಮೇಳನದ ಅಂಗವಾಗಿ ರಚಿಸಲಾಗಿರುವ ಲಾಂಛನವನ್ನು ಇಂದು ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯ ಅವರು ತಮ್ಮ ಕಚೇರಿಯಲ್ಲಿ ಲಾಂಛನ ಬಿಡುಗಡೆ ಮಾಡಿ ಸಮ್ಮೇಳನಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಕ.ಸಾ.ಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶಕ ಕೋಡಿ ಚಂದ್ರಶೇಖರ್ ಹಾಜರಿದ್ದರು.