ಮಡಿಕೇರಿ, ಜು. 26: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ತಾ. 27 ರಂದು (ಇಂದು) ಪತ್ರಿಕಾ ದಿನಾಚರಣೆ ನಡೆಯಲಿದೆ. ಮಡಿಕೇರಿಯ ಪತ್ರಿಕಾಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಿ ಅಭಿನಂದಿಸಲಾಗುತ್ತದೆ. ಶಕ್ತಿ ಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪತ್ರಕರ್ತ ಸಂಘದ ಅಧ್ಯಕೆÀ್ಷ ಬಿ.ಆರ್. ಸವಿತಾ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ಹಾಗೂ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಕೀಲ ಪಿ.ಕೃಷ್ಣಮೂರ್ತಿ ಮತ್ತು ಸಾಹಿತಿ ಹಾಗೂ ಪತ್ರಕರ್ತರಾದ ಭಾರಧ್ವಾಜ ಕೆ.ಆನಂದತೀರ್ಥ ಆಗಮಿಸುತ್ತಿದ್ದಾರೆ. ಪತ್ರಕರ್ತರು ವರದಿಗಾರಿಕೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಪತ್ರಕರ್ತರ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಇವರು ಮಾತನಾಡಲಿದ್ದಾರೆ. ಈ ಬಾರಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ 19 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ.