ಕೂಡಿಗೆ, ಜು. 26 : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿ ಪಶುಪಾಲನ ಇಲಾಖೆಗೆ ಸೇರಿದ ಪಶುವೈದ್ಯಶಾಲೆ ಮತ್ತು ಗೋ ಸದನವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಶಕ್ತಿ ದಿನಪತ್ರಿಕೆಯಲ್ಲಿ ಜು.22 ರಂದು ಪ್ರಕಟಗೊಂಡ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ತಮ್ಮಯ್ಯ ಅವರು ಹುದುಗೂರಿನ ಗೋ ಸದನ ಮತ್ತು ಪಶುವೈದ್ಯ ಶಾಲೆಗೆ ಭೇಟಿ ನೀಡಿ ಪರಿಶಿಲಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವದು ಎಂದು ತಿಳಿಸಿದ್ದಾರೆ. ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಸದಸ್ಯ ರವಿ ಸೇರಿದಂತೆ ಗ್ರಾಮಸ್ಥರು ಇದ್ದರು.