ಸೋಮವಾರಪೇಟೆ, ಜು. 26: ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ಸದಸ್ಯತ್ವ ಅಭಿಯಾನ ನಡೆಯಿತು.
ಯುವ ಮೋರ್ಚಾದ ಪದಾಧಿಕಾರಿಗಳು ಪಟ್ಟಣದ ಅಂಗಡಿಗಳಿಗೆ ತೆರಳಿ ಸದಸ್ಯತ್ವದ ನೋಂದಣಿ ಕಾರ್ಯ ನಡೆಸಿದರು. ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಕಾಳನ ರವಿ, ಪ್ರಧಾನ ಕಾರ್ಯದರ್ಶಿಗಳಾದ ಗಪ್ಪಣ್ಣ, ಕಿಬ್ಬೆಟ್ಟ ಮಧು, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಸುನಿಲ್, ಕಾರ್ಯದರ್ಶಿ ಶರತ್ಚಂದ್ರ, ಪಕ್ಷದ ನಗರಾಧ್ಯಕ್ಷ ಎಸ್.ಆರ್. ಸೋಮೇಶ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.
ವಿಜಯೋತ್ಸವ: ರಾಜ್ಯದ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ವಿಫಲಗೊಂಡ ಹಿನ್ನೆಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪರ ಜಯಕಾರ ಹಾಕಿ ಹರ್ಷ ವ್ಯಕ್ತಪಡಿಸಿದರು.