ಮಡಿಕೇರಿ, ಜು. 26: ಭಾರತ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅನುಮೋದನೆಗೆ ಅನುಗುಣವಾಗಿ ಮೈಸೂರಿನಿಂದ ಮಡಿಕೇರಿವರೆಗೆ ಪ್ರಸ್ತಾವಿತ 4 ಪಥಗಳ ಹೆದ್ದಾರಿ ನಿರ್ಮಾಣಕ್ಕಾಗಿ ಸಾರ್ವಜನಿಕರ ತಿಳುವಳಿಕೆ, ಸಂಪರ್ಕ ಸಭೆ ಮತ್ತು ಅಭಿಪ್ರಾಯವನ್ನು ಸಂಗ್ರಹಿಸಲು ತಾ. 31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ರೊಂದಿಗೆ ಸಮಾಲೋಚನಾ ಸಭೆ ನಡೆಯಲಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ.ಟಿ. ಶ್ರೀಧರ್ ಕೋರಿದ್ದಾರೆ.