ಸೋಮವಾರಪೇಟೆ, ಜು. 27: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ನ ನೂತನ ಆಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ಪದಗ್ರಹಣವನ್ನು ನೆರವೇರಿಸಿ ಮಾತನಾಡಿದ ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ, ಲಯನ್ಸ್ ಕ್ಲಬ್ ಸಾಮಾಜಿಕ ಸೇವೆಯಲ್ಲಿ ಗಣನೀಯ ಸಾಧನೆ ಮಾಡುತ್ತಿದೆ ಎಂದರು.
ನೂತನ ಅಧ್ಯಕ್ಷ ಮಣವಟ್ಟಿರ ಹರೀಶ್, ಕಾರ್ಯದರ್ಶಿ ಕೆ.ಎನ್. ತೇಜಸ್ವಿ, ಲಿಯೋ ಕ್ಲಬ್ ಅಧ್ಯಕ್ಷ ಪ್ರೇಮ್ ಮತ್ತು ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಸಂಸ್ಥೆಯ ಹಿರಿಯ ಸದಸ್ಯ ಎ.ಆರ್. ಮುತ್ತಣ್ಣ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಪ್ರಾಂತೀಯ ಅಧ್ಯಕ್ಷ ಟಿ.ಪಿ. ಸೋಮಣ್ಣ, ವಲಯಾಧ್ಯಕ್ಷರುಗಳಾದ ಶಾಶ್ವತ್ ಬೋಪಣ್ಣ, ದಾಮೋಧರ್, ಲೋಕೇಶ್, ನಿಕಟಪೂರ್ವ ಅಧ್ಯಕ್ಷರುಗಳಾದ ಎಸ್.ಎನ್. ಯೋಗೇಶ್, ಜೆ.ಸಿ. ಶೇಖರ್, ಕಾರ್ಯದರ್ಶಿ ಮಂಜುನಾಥ್ ಚೌಟ, ಖಜಾಂಚಿ ಹೆಚ್.ಎಂ. ಬಸಪ್ಪ, ಹಾಲಿ ಖಜಾಂಚಿ ಎನ್.ಬಿ. ರಾಮಚಂದ್ರ, ಲಿಯೋ ಕ್ಲಬ್ ಮಾಜಿ ಅಧ್ಯಕ್ಷ ಗಗನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.