ನಾಪೆÉÇೀಕ್ಲು, ಜು. 27: ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಮೂರು ತಿಂಗಳುಗಳಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಲ್ಲದೆ, ಗ್ರಾಮಸ್ಥರು ಮತ್ತು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಅಭಿವೃದ್ಧಿ ಅಧಿಕಾರಿ ನೇಮಕ್ಕೆ ಕ್ರಮಕೈಗೊಳ್ಳಬೇಕೆಂದು ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ. ರಷೀದ್ ಮಾತನಾಡಿ, ಪಂಚಾಯಿತಿಯಲ್ಲಿ ಏನು ಕೆಲಸ ಕಾರ್ಯಗಳಾಗಬೇಕಿದ್ದರೂ ಅದಕ್ಕೆ ಅಭಿವೃದ್ಧಿ ಅಧಿಕಾರಿಯ ಸಹಿ ಮತ್ತು ಅನುಮತಿ ಬೇಕಾಗಿದೆ. ಹೀಗಾಗಿ ಎಲ್ಲ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ. ಮಳೆಗಾಲದಲ್ಲಿ ಹೆಚ್ಚಿನ ಅನಾಹುತಗಳು ಸಂಭವಿಸುವ ಕಾರಣ ಕೂಡಲೇ ಜಿಲ್ಲಾಧಿಕಾರಿಗಳು ಅಭಿವೃದ್ಧಿ ಅಧಿಕಾರಿ ನೇಮಕಕ್ಕೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಅಜ್ಜೆಟ್ಟಿರ ವಿಠಲ ಗಣಪತಿ ಇದ್ದರು.