ಕುಶಾಲನಗರ, ಜು. 27: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಕುಶಾಲನಗರ ಪೊಲೀಸ್ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿ ಗಳಿಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಮಾದಕ ವ್ಯಸನ ಪರಿಣಾಮ ಸಂಬಂಧಿತ ವೀಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಚಕ್ರಪಾಣಿ ಮತ್ತು ತಂಡ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಯಿತು.ಕಾಲೇಜು ಪ್ರಾಂಶುಪಾಲ ಎಚ್.ಬಿ.ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಕುಮಾರ ಆರಾಧ್ಯ, ಜಿಲ್ಲಾಸ್ಪತ್ರೆಯ ಮನೋವೈದ್ಯರಾದ ಡಾ. ಸತೀಶ್‍ಕುಮಾರ್, ಡಾ. ಸರ್ವಯಾಮಿ, ಕಾಲೇಜಿನ ವಿವಿಧ ಘಟಕಗಳ ಮುಖ್ಯಸ್ಥರಾದ ರಮೇಶ್‍ಚಂದ್ರ, ಸುಧಾಕರ್, ಪಾವನಿ ಸೇರಿದಂತೆ ಬೋಧಕ ವೃಂದ ಮತ್ತು ವಿದ್ಯಾರ್ಥಿಗಳು ಇದ್ದರು.