ಕೂಡಿಗೆ, ಜು. 27: ಕೂಡಿಗೆ ಗ್ರಾಮ ಪಂಚಾಯ್ತಿಯ 14ನೇ ಹಣಕಾಸು ಯೋಜನೆಯ ಕಾಮಗಾರಿಯ ಕ್ರಿಯಾಯೋಜನೆಯ ತಯಾರಿಕೆಗೆ ಸಂಬಂಧಿಸಿದಂತೆ ತುರ್ತು ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ ಅವರು ವಹಿಸಿದ್ದು, 14ನೇ ಹಣಕಾಸು ಯೋಜನೆಯ ಕಾಮಗಾರಿಗೆ ಸಂಬಂಧಪಟ್ಟಂತೆ ಎಲ್ಲಾ ವಾರ್ಡುಗಳಲ್ಲಿ 24 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ನಡೆಸಲು ತೀರ್ಮಾನಿಸಲಾಯಿತು.
ಮೂಲಭೂತ ಸೌಕರ್ಯಗಳಾದ, ಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಯಿತು.
ತುರ್ತು ಸಭೆಯ ತೀರ್ಮಾನದಂತೆ ಕಾಮಗಾರಿಗಳನ್ನು ಆಯಾ ವಾರ್ಡುಗಳಿಗೆ ವಿಂಗಡಣೆ ಮಾಡಲಾಯಿತು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ಕುಮಾರ್ ಸೇರಿದಂತೆ ಸದಸ್ಯರು ಇದ್ದರು.